(ನ್ಯೂಸ್ ಕಡಬ) newskadaba.com ಕೆ.ಆರ್.ಪೇಟೆ, ಸೆ.27. ಮುಡಾ ನಿವೇಶನ ಹಂಚಿಕೆ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ಗೆ ಮತ್ತೊಂದು ಭೂ ಕಬಳಿಕೆಯ ಉರುಳು ಸುತ್ತಿಕೊಂಡಿದೆ. ಮುಡಾ ಹಗರಣದಲ್ಲಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ ಸಂದಿಗ್ಧ ಪರಿಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರ ವಿರುದ್ಧ ಲೋಕಯುಕ್ತದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಾಜಿ ಕಾರ್ಪೊರೇಟರ್ ಎನ್ ಆರ್ ರಮೇಶ್ ಅವರು ಭೂ ಕಬಳಿಕೆ ಆರೋಪದಡಿಯಲ್ಲಿ ಇಬ್ಬರು ಸಚಿವರು ಹಾಗೂ ಹಿರಿಯ IAS ಅಧಿಕಾರಿ ವಿರುದ್ಧ ಲೋಕಾಯುಕ್ತದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ ಖರ್ಗೆ, ರಾಹುಲ್ ಖರ್ಗೆ, ರಾಧಾಬಾಯಿ ಖರ್ಗೆ, ರಾಧಾಕೃಷ್ಣ, ಸಚಿವ M. B. ಪಾಟೀಲ್ ಮತ್ತು IAS ಅಧಿಕಾರಿ ಡಾ ಎಸ್ ಸೆಲ್ವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.