(ನ್ಯೂಸ್ ಕಡಬ) newskadaba.com ನವದೆಹಲಿಸೆ.27: ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸದಸ್ಯತ್ವ ಭಾರತದ ಮಹತ್ವಾಕಾಂಕ್ಷೆಗೆ ಮತ್ತಷ್ಟು ಬಲಬಂದಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಿವೆ.ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬೆಂಬಲ ಘೋಷಿಸಿದ್ದಾರೆ.ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯ ಸ್ಥಾನ ನೀಡುವ ಸಂಬಂಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡೆಸಿದ್ದ ಮಾತುಕತೆ ಕೊನೆಗೂ ಯಶಸ್ವಿಯಾಗಿದ್ದು, ಫ್ರಾನ್ಸ್ ಮತ್ತು ಬ್ರಿಟನ್ ದೇಶಗಳು ಬೆಂಬಲ ನೀಡಲು ಮುಂದಾಗಿದೆ.
ಭದ್ರತಾ ಮಂಡಳಿ ಕಾಯಂ ಸದಸ್ಯತ್ವ:ಭಾರತಕ್ಕೆ ಬ್ರಿಟನ್, ಫ್ರಾನ್ಸ್ ನಿಂದ ಬೆಂಬಲ
