(ನ್ಯೂಸ್ ಕಡಬ) newskadaba.com ಸೆ. 27. ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಒಂದು ಸ್ಥಾನವನ್ನು ಭರ್ತಿ ಮಾಡಲು ಉಪಚುನಾವಣೆ ನಡೆಸಲು ಗುರುವಾರ ಅಧಿಸೂಚನೆ ಹೊರಡಿಸಲಾಗಿದೆ.
ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅಧಿಸೂಚನೆ ಹೊರಡಿಸಿದರು. ನಾಮಪತ್ರಗಳ ಸಲ್ಲಿಕೆ ಗುರುವಾರದಿಂದಲೇ ಆರಂಭವಾಗಿದ್ದು, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.