(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಕೊಯಿಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆಯು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷೆ ಸುಶೀಲ ಬಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ 1.13 ಕೋಟಿ ರೂ. ವ್ಯವಹಾರ ನಡೆಸಿ 3.44 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 71 ಪೈಸೆ ಬೋನಸ್ ನೀಡಲಾಗುವುದು ಎಂದರು.
ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ ವಾರಿಜ ಆರ್ (ಪ್ರಥಮ), ಸುಂದರಿ ಎ.(ದ್ವಿತೀಯ) ಮತ್ತು ಶುಭಾ(ತೃತೀಯ) ಅವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಹಾಲು ಪೂರೈಸಿದ ಎಲ್ಲ ಸದಸ್ಯರಿಗೆ ಮತ್ತು ಸಿಬ್ಬಂದಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.
ಎಸ್ಸೆಸ್ಸೆಲ್ಸಿ ಸಾಧಕಿ ಅನನ್ಯಾ ಅವರನ್ನು ಅಭಿನಂದಿಸಲಾಯಿತು. ಸಂಘದ ಉಪಾಧ್ಯಕ್ಷೆ ವಿಮಲ ಎ, ವಿಸ್ತರಣಾಧಿಕಾರಿ ಆದಿತ್ಯ ಪಿ, ನಿರ್ದೇಶಕರಾದ ವಾರಿಜ ಆರ್. ಲಲಿತ ಪಿ, ಜಯಂತಿ ಎಸ್, ಶರ್ಮಿಳಾ, ಯಕ್ಷತಾ, ನೀತಾ ಎನ್. ತೀರ್ಥಾವತಿ, ಪಾರ್ವತಿ ಪಿ, ಕುಸುಮಾವತಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಪುಷ್ಪಾ ಕಾರ್ಯಕ್ರಮ ನಿರೂಪಿಸಿದರು. ಹಾಲು ಪರೀಕ್ಷಕಿ ಹರಿಣಾಕ್ಷಿ ಸ್ವಾಗತಿಸಿದರು. ಯಕ್ಷಿತಾ ವಂದಿಸಿದರು.