ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂ. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಜನಾಧಿಕಾರಸಂಘರ್ಷ ಪರಷತ್‌ನ ಆದರ್ಶ ಆರ್. ಐಯ್ಯ‌ರ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್‌ ಕುಮಾರ್‌ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ದಾಖಲಿಸಿದೆ.

Also Read  ಚೂರಿಯಿಂದ ಇರಿದು ಯುವಕನ ಕೊಲೆ  

error: Content is protected !!
Scroll to Top