ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್

(ನ್ಯೂಸ್ ಕಡಬ) newskadaba.com ಸೆ. 27. ಚೆನ್ನೈ: ಇಂದು ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್‌ ಲಿಮಿಟೆಡ್‌ ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸೆಲ್‌ಫೋನ್‌ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಉದ್ಯೋಗಿಗಳನ್ನುಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ.

ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದ್ದು, ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಬಿಡಿಭಾಗಗಳ ಪೈಂಟಿಂಗ್‌ ಘಟಕದಲ್ಲಿ ಬೆಳಗ್ಗೆ 5: 30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

Also Read  ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ 'ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ" ಎಂದು ಪ್ರಾಣ ಬಿಟ್ಟ ಯುವತಿ..!!

error: Content is protected !!
Scroll to Top