ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 27. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಳೆದ ಸೆಪ್ಟೆಂಬರ್ 11ರಂದು ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿತ್ತು. ಈ ಗಲಭೆ ಪ್ರಕರಣದ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ನಾಗಮಂಗಲವನ್ನು ಸಂಪೂರ್ಣ ನಿಯಂತ್ರಿಸಲು ಹರಸಾಹಸಪಟ್ಟಿದ್ದರು. ಆರೋಪಿಗಳನ್ನು ಬಂಧಿಸಿದ ಬಳಿಕ ನಾಗಮಂಗಲದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಂಡಿತ್ತು.

Also Read  ➤ವರದಕ್ಷಿಣೆ ಕೊಟ್ಟಿಲ್ಲ ಎಂದು ಮದುವೆ ನಿರಾಕರಿಸಿದ ಯುವಕ

 

error: Content is protected !!
Scroll to Top