ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ – News Kadaba

ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 28. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 29ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ-2024ರ ಪರೀಕ್ಷೆಗಳು ನಡೆಯಲಿರುವ 22 ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ 22 ಪರೀಕ್ಷಾ ಕೇಂದ್ರಗಳ  200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ, ಉಪ ಪೊಲೀಸ್ ಆಯುಕ್ತ ಮತ್ತು ವಿಶೇಷ ಕಾರ್ಯ ನಿರ್ವಾಹಕ ದಂಡಾಧಿಕಾರಿ ಸಿದ್ಧಾರ್ಥ್ ಗೋಯಲ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಯಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ (ಆಸಿಡ್) ಅಥವಾ ಸ್ಫೋಟಕ ವಸ್ತುಗಳನ್ನು  ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಯಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top