ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜರಾಗಿತ್ತು. ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ದಾರಿಯಾಗಿ ಸಾಗುತ್ತಿದ್ದ ವಾಹನ ಚಾಲಕರು ಇದನ್ನು ಗಮನಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ .

Also Read  ಮಂಗಳೂರಿನಿಂದ ಬಾದಾಮಿಗೆ ಪ್ರಯಾಣಕ್ಕೆ ಮುಂದಾದ ಅನ್ಯಕೋಮಿನ ಜೋಡಿ..! ➤ ಬಜರಂಗದಳ ಕಾರ್ಯಕರ್ತರ ದಾಳಿ- ಜೋಡಿ ಪೊಲೀಸ್ ವಶಕ್ಕೆ

error: Content is protected !!
Scroll to Top