(ನ್ಯೂಸ್ ಕಡಬ) newskadaba.com ಸೆ. 28. ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಹೊತ್ತಿ ಬೆಂಕಿ ಅವಘಾತಕ್ಕೀಡಾಗಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು
