(ನ್ಯೂಸ್ ಕಡಬ) newskadaba.com ಸೆ. 28 ಪುಣೆ: ಪೆಟ್ರೋಲ್, ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಒಮತ ಮೂಡಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಕರೆ ನೀಡಿದ್ದಾರೆ.ಪುಣೆ ಇಂಟರ್‌ನ್ಯಾಶನಲ್ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದ ಅವರು, ಈಗ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ನಾನು ಸಲಹೆಯನ್ನು ಕೇಳಿದ್ದೇನೆ ಎಂದಿದ್ದಾರೆ.