ಜಮ್ಮು & ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

(ನ್ಯೂಸ್ ಕಡಬ) newskadaba.com ಸೆ. 27 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ನಡೆದ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆಗೈದಿವೆ. ಈ ವೇಳೆ ಮೂವರು ಸೇನಾ ಸಿಬ್ಬಂದಿ ಮತ್ತು ಓರ್ವ ಪೊಲೀಸ್‌ ಅಧಿಕಾರಿ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಕುಲ್ಗಾಮ್ ಜಿಲ್ಲೆಯ ಅಡಿಗಮ್ ದೇವ್ಸರ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಜರುಗಿದೆ. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮೂವರು ಸೈನಿಕರು ಮತ್ತು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಗಾಯಗೊಂಡಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read  ಕಾಸರಗೋಡು: ಅಡೂರು ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು..!

error: Content is protected !!
Scroll to Top