ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು.

ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ ಎಲ್ಲಾ ಠಾಣೆಗಳ ಮುಂಭಾಗ ಪ್ರತಿಭಟನೆ ನಡೆಸುತ್ತೇವೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.

Also Read  ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

error: Content is protected !!
Scroll to Top