ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ – News Kadaba

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಸೆ. 28. ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್‌ ಬೆದರಿಕೆ ಯ ಕುರಿತು ಇ-ಮೇಲ್‌ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ತಾಜ್‌ ವೆಸ್ಟಂಡ್‌ ಹೋಟೆಲ್‌ ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್‌ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು.

ಈ ಸಂದೇಶವನ್ನು ಗಮನಿಸಿದ ಹೋಟೆಲ್‌ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್‌ ನಿಷ್ಕ್ರಿಯದಳ, ಬಾಂಬ್‌ ಪತ್ತೆದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಹೋಟೆಲ್‌ ಸೇರಿದಂತೆ ಸುತ್ತಮುತ್ತ ಆವರಣ ಪರಿಶೀಲಿಸಿದಾಗ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. ಇದು ಹುಸಿ ಸಂದೇಶ ಎಂಬುದು ಗೊತ್ತಾಗಿ ಹೋಟೆಲ್‌ನವರು ನಿಟ್ಟುಸಿರು ಬಿಟ್ಟಿದ್ದಾರೆ. ಇತ್ತೀಚೆಗೆ ಖಾಸಗಿ ಶಾಲೆಗಳು, ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದ್ದ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ಹೋಟೆಲ್‌ಗೆ ಬಾಂಬ್‌ ಸಂದೇಶ ಬಂದಿರುವುದು ಆತಂಕಕ್ಕೀಡುಮಾಡಿದೆ.

Scroll to Top