ಇನ್ಮುಂದೆ ಹೆಣವನ್ನು ಮುಂದಿಟ್ಟು ಹಣ ಪಡೆದರೆ ಕ್ರಿಮಿನಲ್ ಕೇಸ್ ► ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮೈಸೂರು, ಮಾ.10. ಇನ್ಮುಂದೆ ಅನಾರೋಗ್ಯದಿಂದಾಗಿ ರೋಗಿ ಆಸ್ಪತ್ರೆಯಲ್ಲಿ ಮೃತಪಟ್ಟಲ್ಲಿ ಮೃತದೇಹವನ್ನು ಪಡೆಯಲು ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಹಣ ಕಟ್ಟುವಂತೆ ಒತ್ತಾಯಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಅವರು ಶನಿವಾರದಂದು ಮೈಸೂರಿನಲ್ಲಿ 210 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಇನ್ನು ಮುಂದೆ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು ಮೃತಪಟ್ಟರೆ ಹಣ ಕೊಟ್ಟು ನಂತರ ಹೆಣ ತೆಗೆದುಕೊಂಡು ಹೋಗಿ ಎಂದು ಹೇಳುವ ಹಾಗಿಲ್ಲ. ಹಾಗೇನಾದರು ಹೇಳಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ದೇಶದ ಬೃಹತ್ ಹೃದ್ರೋಗ ಆಸ್ಪತ್ರೆಯನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲಾಗಿದ್ದು, ಆರೋಗ್ಯಭಾಗ್ಯ ಯೋಜನೆಯಡಿ ಹೆಲ್ತ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆಯಬಹುದು ಎಂದರು‌.

Also Read  ಉಸಿರಾಟ ಸಮಸ್ಯೆ: ಶಾಸಕ ಎಸ್.ಎ.ರಾಮದಾಸ್ ಆಸ್ಪತ್ರೆಗೆ ದಾಖಲು

error: Content is protected !!
Scroll to Top