ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು – News Kadaba

ಆಟೋಗೆ ಲಾರಿ ಡಿಕ್ಕಿ ಹೊಡೆದು ಯುವತಿ ಸಾವು

(ನ್ಯೂಸ್ ಕಡಬ) newskadaba.com ಸೆ. 28. ಆಟೋದಲ್ಲಿ ಹೋಗುತ್ತಿದ್ದ ಯುವತಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಕಬ್ಬನ್‌ಪಾರ್ಕ್‌ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಮೃತಪಟ್ಟ ಯುವತಿಯನ್ನು ಕೇರಳ ಮೂಲದ ಶಾಲಿನಿ ಎಂದು ಗುರುತಿಸಲಾಗಿದೆ. ಆಟೋಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆನ್ಸನ್‌ ಟೌನ್‌ ನ ಚಿನ್ನಪ್ಪ ಗಾರ್ಡನ್‌ ನಿಂದ ಶಾಲಿನಿ ಅವರು ಯಾತ್ರಿ ಆ್ಯಪ್‌ ಮೂಲಕ ಆಟೋ ಬುಕ್‌ ಮಾಡಿಕೊಂಡು ಮೆಜೆಸ್ಟಿಕ್‌ ಕಡೆಗೆ ಮುಂಜಾನೆ 4 ಗಂಟೆ ಸುಮಾರಿಗೆ ಹೋಗುತ್ತಿದ್ದ ವೇಳೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಸಿಗ್ನಲ್‌ ಜಂಪ್‌ ಮಾಡಿಕೊಂಡು ಬಂದ ಲಾರಿ ಇವರು ಪ್ರಯಾಣಿಸುತ್ತಿದ್ದ ಆಟೋಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಯುವತಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top