ಗೃಹಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಸಚಿವೆ ಹೆಬ್ಬಾಳಕರ್ ಮಹತ್ವದ ಮಾಹಿತಿ

(ನ್ಯೂಸ್ ಕಡಬ) newskadaba.com ಸೆ. 28. ಗೃಹಲಕ್ಷ್ಮೀ ಯೋಜನೆಯ ಜುಲೈ ತಿಂಗಳ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್‌ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ ಆಗ್ರಹವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

Scroll to Top