(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ.30. ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯ ತಪ್ಪಿ ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನವೀನ್ ಬೆಳ್ಚಾಡ(48) ಎಂದು ಗುರುತಿಸಲಾಗಿದೆ. ನವೀನ್ ಅವರು ರವಿವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಆವರಣ ಗೋಡೆಯನ್ನು ಸ್ವಚ್ಛಗೊಳಿಸುತ್ತಿದ್ದರು.ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Also Read ಕಡಬ: ಆಕಸ್ಮಿಕವಾಗಿ ಬಾವಿಗೆ ಬಿದ್ದ ದನ ➤ ಸ್ಥಳೀಯರ ಸಹಕಾರದೊಂದಿಗೆ ಬಾವಿಯಿಂದ ಮೇಲಕ್ಕೆತ್ತಿದ ಅಗ್ನಿಶಾಮಕ ದಳ