ಈ ಬಾರಿ ಬಿಗ್ ಬಾಸ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಕರಾವಳಿ ಯುವಕ ಧನರಾಜ್ ಆಚಾರ್ಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.30. ಕರಾವಳಿಯ ಯುವಕ, ಬಹುಮುಖ ಪ್ರತಿಭೆಯ ಕಲಾವಿದ, ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ಟಿಕ್‌ಟಾಕ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದವರು. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ. ಧನರಾಜ್, ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2ರ ಸ್ಪರ್ಧಿಯಾಗಿ ಇಡೀ ವೀಕ್ಷಕರ ಮನಗೆದಿದ್ದು, ವಿಡಿಯೋಗಳ ಮೂಲಕ ಹೆಚ್ಚು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

Also Read  ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ - ಇಂಧನ ಸಚಿವರ ಸಮರ್ಥನೆ..!

 

error: Content is protected !!
Scroll to Top