ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.30. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭ ಮಾಡಲಿದ್ದಾರೆ.

ಈಗಾಗಲೇ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು ಮೊದಲು ದೂರುದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಿದೆ. ಜೊತೆಗೆ ದೂರುದಾರರ ಬಳಿ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪೊಲೀಸರು ಸಂಗ್ರಹ ಮಾಡಲಿದ್ದಾರೆ. ಮುಡಾ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು.

Also Read  ಯಾದಗಿರಿಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ ➤ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ

 

error: Content is protected !!
Scroll to Top