(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.30. ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ 35ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಗರದ ಹೊರವಲಯದ ಮೈಸೂರು-ಬೆಂಗಳೂರು ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಎದುರುಗಡೆ ಇಂದು ಬೆಳಗ್ಗೆ ನಡೆದಿದೆ.
ಇಂದು ಬೆಳಗ್ಗೆ ತುಮಕೂರಿನಿಂದ ಮದ್ದೂರು ಮಾರ್ಗವಾಗಿ ಮೈಸೂರಿಗೆ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬಂದ ಗೂಡ್ಸ್ ಟೆಂಪೋಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದು ಆ ಪೈಕಿ ಶಾಲ ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನವರಾಗಿದ್ದಾರೆ ಎಂದು ತಿಳಿದುಬಂದಿದೆ.
