(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.30. ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸ್ಸು ಕರೆತರಲು ಗೊತ್ತುಪಡಿಸಿದ ಸ್ಪೇಸ್ಎಕ್ಸ್ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬಾಹ್ಯಾಕಾಶ ಕಕ್ಷೆಯಲ್ಲಿ ಲ್ಯಾಂಡ್ ಆಗಿದೆ ಎಂದು ವರದಿಯಾಗಿದೆ.
ಸ್ಪೇಸೆಕ್ಸ್ ಬಾಹ್ಯಾಕಾಶ ನೌಕೆ ರವಿವಾರ 5:30ಕ್ಕೆ ಬಾಹ್ಯಾಕಾಶದಲ್ಲಿ ಉಳಿದುಕೊಂಡಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಜೊತೆ ಸಂಪರ್ಕವನ್ನು ಸಾಧಿಸಿದೆ. ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶಕ್ಕೆ ಬಂದ ಹೊಸ ಒಡನಾಡಿಗಳಿಗೆ ಸ್ವಾಗತವನ್ನು ಕೋರಿದ್ದಾರೆ.
