ರಾಜ್ಯದಲ್ಲಿ ಪ್ರತ್ಯೇಕ ನಾಡಧ್ವಜವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ► ನೂತನ ನಾಡಧ್ವಜದ ಬಣ್ಣ, ವಿನ್ಯಾಸ ತಿಳಿಯಬೇಕೇ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.11. ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕೆಂಬ ಬೇಡಿಕೆಯು ಈಡೇರಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡನಾಡಿನ ನಾಡಧ್ವಜವನ್ನು ಅಧಿಕೃತವಾಗಿ ಅನಾವರಣಗೊಳಿಸಿದ್ದಾರೆ.

ನಾಡಧ್ವಜ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರವು ಹಳದಿ, ಬಿಳಿ ಮತ್ತು ಕೆಂಪು ಬಣ್ಣಗಳಿಂದ ಕೂಡಿದ ನಾಡಧ್ವಜವನ್ನು ಸಿದ್ಧಪಡಿಸಿದ್ದು, ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಸಾಹಿತಿ ಹಂಪ ನಾಗರಾಜಯ್ಯ ತ್ರಿವರ್ಣ ಬಣ್ಣದ ನಾಡಧ್ವಜವನ್ನು ವಿನ್ಯಾಸಗೊಳಿಸಿದ್ದು, ರಾಜ್ಯ ಸರಕಾರಕ್ಕೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Also Read  ಪಡಿತರ ಅಕ್ಕಿಗೆ ಪೌಷ್ಟಿಕಾಂಶ ಸೇರ್ಪಡೆ- ಪ್ರಲ್ಹಾದ ಜೋಶಿ

error: Content is protected !!
Scroll to Top