ತಮಿಳು ಚಿತ್ರದ ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಚೆನ್ನೈ(ಅ.01):  ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅನಾರೋಗ್ಯದಿಂದ ಸೋಮವಾರ ತಡರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಜನಿಕಾಂತ್ ದಾಖಲಾಗಿದ್ದರ ಬಗ್ಗೆ ಆಸ್ಪತ್ರೆ ಅಥವಾ ರಜನಿಕಾಂತ್ ಅವರ ಕುಟುಂಬದಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. 73 ವರ್ಷದ ರಜನಿಕಾಂತ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.

error: Content is protected !!
Scroll to Top