ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ. 01. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಗೋವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿ ಆದೇಶ ಹೊರಡಿಸಿದೆ.

ಭಾರತದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆ ಮತ್ತು ಅದರ ಸಂಪ್ರದಾಯಗಳನ್ನು ಉಲ್ಲೇಖಿಸಿ ಮಹಾಯುತಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಧಿಕೃತ ಆದೇಶದಲ್ಲಿ, ಗೋವುಗಳು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಮಿಲಿಟರಿ ಮಹತ್ವವನ್ನು ಹೊಂದಿದೆ ಎಂದು ಸರ್ಕಾರ ಹೇಳಿದೆ.

Also Read  ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

 

error: Content is protected !!
Scroll to Top