ಬಿಪಿಎಲ್ ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ- ಆರ್.ವಿ.ದೇಶಪಾಂಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ.

ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, ಅರ್ಹರಿಗೆ ಈ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪರಿಶೀಲನೆ ಮತ್ತು ಸಲಹೆಗಳನ್ನು ಪ್ರಸ್ತಾಪಿಸುವ ಕಾರ್ಯವನ್ನು ಉಪಸಮಿತಿಗೆ ವಹಿಸಲಾಗಿದೆ ಎಂದು ಹೇಳಿದರು.

Also Read  ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ

 

 

error: Content is protected !!
Scroll to Top