ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 01. ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವೊಂದನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ನ ಜಿಲ್ಲಾದ್ಯಕ್ಷ ನವೀನ್‌ಚಂದ್ರ ಶೆಟ್ಟಿ ರಟ್ಟಾಡಿ ತಿಳಿಸಿದ್ದಾರೆ.

ಅ.2ರಂದು ಮುಂಜಾನೆ 9:30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾ ಪ್ರಾರಂಭಗೊಳ್ಳಲಿದ್ದು, 9ರಿಂದ 10ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. ಪೂರ್ವಾಹ್ನ 11ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಇದನ್ನು ಉದ್ಘಾಟಿಸಲಿದ್ದಾರೆ. ಕಿರಿಯ ಯತಿಗಳಾದ ಶ್ರೀಸುಶ್ರೀಂದ ತೀರ್ಥ ಶ್ರೀಪಾದರು ಉಪಸ್ಥಿತರಿರಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

Also Read  ಉಡುಪಿ : ಒಂದೇ ಕಡೆ 4 ಭಾರೀ ಗಾತ್ರದ ಹೆಬ್ಬಾವುಗಳು ಪತ್ತೆ.!

 

error: Content is protected !!
Scroll to Top