ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!



(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 01.  ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ ನಡೆದಿದೆ.







ಮೃತಪಟ್ಟ ವಿದ್ಯಾರ್ಥಿಯನ್ನು ನಾಗೂರು ನಿವಾಸಿ, ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ (19) ಎಂದು ಗುರುತಿಸಲಾಗಿದೆ. ಧನುಷ್ ಇಂದು ಮಧ್ಯಾಹ್ನ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟ‌ರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ವೇಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.






 

error: Content is protected !!
Scroll to Top