ಪುಣೆಯಲ್ಲಿ ಹೆಲಿಕಾಫ್ಟರ್ ಪತನ

(ನ್ಯೂಸ್ ಕಡಬ)newskadaba.com, ಮುಂಬೈ(.02) :ಪುಣೆ ಸಮೀಪ ಬವ್ ಧಾನ್ ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Also Read  ಸಿನಿಮೀಯ ಶೈಲಿಯಲ್ಲಿ ಕಾರು ಪಲ್ಟಿ ➤ ಚಾಲಕ ಅದೃಷ್ಟವಶಾತ್ ಪಾರು

 

error: Content is protected !!
Scroll to Top