ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹೋನ್ನತ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಗಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

”ಪೂಜ್ಯ ಬಾಪು ಅವರ ಜನ್ಮ ಜಯಂತಿಯಂದು ಎಲ್ಲ ದೇಶವಾಸಿಗಳ ಪರವಾಗಿ ಅವರಿಗೆ ನಮನಗಳು. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ನಮಗೆಲ್ಲ ಸ್ಫೂರ್ತಿʼʼ ಎಂದು ಹೇಳಿದ್ದಾರೆ. ʼʼಸೈನಿಕರು, ರೈತರು ಮತ್ತು ದೇಶದ ಸ್ವಾಭಿಮಾನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವಪೂರ್ವಕ ನಮನಗಳುʼʼ ಎಂದು ಮೋದಿ ಬರೆದುಕೊಂಡಿದ್ದಾರೆ.

Also Read  ಜಮ್ಮು- ಕಾಶ್ಮೀರ್ : ಎನ್ ಕೌಂಟರ್ ಗೆ ಮೂವರು ಬಲಿ

 

error: Content is protected !!
Scroll to Top