ನಾಳೆ ವಿಶ್ವಪ್ರಖ್ಯಾತ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ

(ನ್ಯೂಸ್ ಕಡಬ)newskadaba.com,ಮೈಸೂರು (.02) : ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.

Also Read  ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು - ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ

error: Content is protected !!
Scroll to Top