ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 02.  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ  ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು.

Also Read  ನಗರಪಾಲಿಕೆ ಜಂಟಿ ಆಯುಕ್ತರಾಗಿ ಸಂತೋಷ್ ಕುಮಾರ್

ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ.ಸ್ವಾಗತಿಸಿ, ನಿರೂಪಿಸಿದರು. ಮತ್ತು ಸಹಾಯಕ ಕಾರ್ಯಕ್ರಮಾಧಿಕಾರಿ ಭಾಗ್ಯಶ್ರೀ ವಂದಿಸಿದರು.ಕಾಲೇಜಿನ ಉಪನ್ಯಾಸಕರು ಮತ್ತು 100 ಎನ್ಎಸ್ಎಸ್ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

error: Content is protected !!
Scroll to Top