(ನ್ಯೂಸ್ ಕಡಬ) newskadaba.com ಹೈದರಬಾದ್, ಅ. 02. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರುಕ್ಮಿಣಿ ವಸಂತ್ ಅವರು ಇದೀಗ ಜೂ ಎನ್‌ಟಿಆರ್ ನಟನೆಯ ಮುಂದಿನ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗಷ್ಟೇ ಜೂ ಎನ್‌ಟಿಆರ್ ಅವರ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಇದೀಗ ಪ್ರಶಾಂತ್ ನೀಲ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಈ ಸಿನಿಮಾ ಮುಹೂರ್ತ ಕೆಲ ವಾರಗಳ ಹಿಂದಷ್ಟೆ ಮುಗಿದಿದ್ದು, ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾಗೆ ಜೂ ಎನ್‌ಟಿಆರ್ ಅವರಿಗೆ ಸ್ಯಾಂಡಲ್ ವುಡ್ ನಟಿ ರುಕ್ಮಿಣಿ ವಸಂತ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
Also Read ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ರಕ್ಷಿತ್ ಶೆಟ್ಟಿ ➤ 5 ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ಟೀಸರ್ ರಿಲೀಸ್