(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸೈಂಟ್ ಜೋಕಿಮ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ರಾಷ್ಟ್ರೀಯತೆ ,ತ್ಯಾಗ, ಸತ್ಯ ಹಾಗೂ ಅಹಿಂಸೆಯ ಮಾರ್ಗ ಇಂದಿನ ಯುವ ಪೀಳಿಗೆಗೆ ಅತಿ ಅಗತ್ಯವಾದ ಮೌಲ್ಯಗಳಾಗಿದೆ; ಆದ್ದರಿಂದ ಇಂತಹ ಮಹಾತ್ಮರ ಜಯಂತಿಯ ಆಚರಣೆ ಉದ್ದೇಶವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಅರ್ಥೈಸಿಕೊಂಡು ಅನುಸರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಸಂಚಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಪುಷ್ಪಾರ್ಚನೆ ಮಾಡಿದರು. ವಿದ್ಯಾರ್ಥಿನಿ ಸಾನಿಕ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಮ್ಯಾಥ್ಯು ಇ..ಜೆ ,ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಲತಾ, ವಿದ್ಯಾರ್ಥಿ ಮುಖಂಡರಾದ ಮನ್ವಿತ್ ಕೆ ಹಾಗೂ ಫಾತಿಮತ್ ಝುಲ್ಪಾ ಉಪಸ್ಥಿತರಿದ್ದರು.ಪ್ರೌಢಶಾಲಾ ವಿದ್ಯಾರ್ಥಿಗಳಾದ ಭೂಮಿಕಾ ಹೆಚ್ ಸ್ವಾಗತಿಸಿ, ಭವಿಷ್ ವಂದಿಸಿದರು. ಕಾಲೇಜು ವಿದ್ಯಾರ್ಥಿ ಮಹಮದ್ ಕನ್ಝ್ ಕಾರ್ಯಕ್ರಮ ನಿರೂಪಿಸಿದರು.