‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ

(ನ್ಯೂಸ್ ಕಡಬ)newskadaba.com, ಮೈಸೂರು(.03): ಸಿ.ಎಂ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Also Read  2ನೇ ಏರ್ಪೋರ್ಟ್ ನಿರ್ಮಾಣಕ್ಕೆ ಜಾಗ ನಿಗದಿ..!

error: Content is protected !!
Scroll to Top