(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ಗುರುವಾರ ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆಗೊಂಡಿತು. ಕೇಂದ್ರದ ಮಾಜಿ ಸಚಿವ,ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಅ. 13 ರವರೆಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸಹ ಪೂಜಿಸಲಾಗುತ್ತದೆ. ಅ. 13ರಂದು ಸಂಜೆ ಮೆರವಣಿಗೆ ಮೂಲಕ ಮಂಗಳೂರು ದಸರಾ ಸಮಾಪನೆಗೊಳ್ಳಲಿದೆ.
ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ
