(ನ್ಯೂಸ್ ಕಡಬ)newskadaba.com, ನವದೆಹಲಿ(ಅ.03): ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದೆ. ಅಲ್ಲದೆ, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿರುವುದರಿಂದ ಗುಡುಗು, ಮಿಂಚು, ಬಲವಾದ ಗಾಳಿ ಸಹಿತ ಮಳೆಯಾಗುತ್ತಿದೆ. ಪೂರ್ವ ಮುಂಗಾರಿನ ರೀತಿಯಲ್ಲಿ ರಭಸವಾದ ಮಳೆ ಕೆಲವೆಡೆ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇನ್ನೂ 3 ದಿನ ಮುಂದುವರೆಯಲಿದೆ ಮಳೆ
