(ನ್ಯೂಸ್ ಕಡಬ)newskadaba.com, ಮಣಿಪುರ(ಅ.03): ಮಣಿಪುರದ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಲು ಎಲ್ಲ 16 ಜಿಲ್ಲಾ ಪೊಲೀಸ್ ವರಿಷ್ಠರಿಗೆ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ದ ಗುಂಡಿನ ಕಾಳಗದಲ್ಲಿ ಮಣಿಪುರ ರೈಫಲ್ಸ್ ಸೈನಿಕ ಸೇರಿದಂತೆ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ.
ಬುಧವಾರ ಎರಡು ನಾಗಾ ಗ್ರಾಮಗಳ ನಿವಾಸಿಗಳ ನಡುವೆ ಘರ್ಷಣೆ ನಡೆದಿದೆ. ಎರಡು ಗ್ರಾಮಗಳ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆಡಿಜಿ ಈ ಘಟನೆ ವರದಿಯಾದ ಬಳಿಕ ಮಣಿಪುರ ಪೊಲೀಸರು ಎಲ್ಲಾ 16 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗೆ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಲ್. ಕೈಲುನ್ ಹೊರಡಿಸಿರುವ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.