150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ’ – ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಮೈಸೂರು(.03): ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

Also Read  ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

 

 

error: Content is protected !!
Scroll to Top