ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ

(ನ್ಯೂಸ್ ಕಡಬ)newskadaba.com, ಮಂಗಳೂರು(.04): ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ ಎಂದು ಗುರುತಿಸಲಾಗಿದೆ.1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ಸುಮಾರು 1.75 ಲಕ್ಷ ರೂ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!

Join the Group

Join WhatsApp Group