ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಮಂಗಳೂರು, ಅ.04.  ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ. ಅರ್ಜಿ ಸ್ವೀಕರಿಸಿದ ನಂತರ ಅರ್ಜಿದಾರರು ಅಗ್ನಿಶಾಮಕ ಇಲಾಖೆ, ಸ್ಥಳೀಯ ಸಂಸ್ಥೆ ಹಾಗೂ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ನೇರವಾಗಿ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಅರ್ಜಿ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.

Also Read  ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

 

 

error: Content is protected !!
Scroll to Top