ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ.04.  ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Also Read  ಪುತ್ತೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಭರಣ ಕಳವು

 

 

 

error: Content is protected !!
Scroll to Top