ಉತ್ತರಪ್ರದೇಶ: ಭೀಕರ ಅಪಘಾತದಲ್ಲಿ 10 ಜನ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04): ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಟ್ರಕ್‌ ಟ್ರಾಕ್ಟರ್‌ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಜನರು ಸಾವನ್ನಪ್ಪಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದೋಹಿ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯ ಮುಗಿಸಿ ಹಿಂತಿರುಗುತ್ತಿದ್ದ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಎಸ್‌‍ಪಿ ತಿಳಿಸಿದ್ದಾರೆ.ತಕ್ಷಣ ಎಸ್ಪಿ ಮತ್ತು ಇತರ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಘಟನಾ ಸ್ಥಳಕ್ಕೆ ಧಾವಿಸಿದರು.

Scroll to Top