ದಸರಾ ದೀಪಾಲಂಕಾರಕ್ಕೆ ಡಿಕೆಶಿ ಚಾಲನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (.04):  ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್ ದೀಪಾಲಂಕಾರಕ್ಕೆ ರಾಜ್ಯ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಗುರುವಾರದಂದು ಚಾಲನೆ ನೀಡಿದರು.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದರು.

“ಪವರ್ ಮ್ಯಾನ್”ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್ ರಥ ಕ್ಕೂ ಚಾಲನೆ ನೀಡಲಾಯಿತು.ಪ್ರತಿ ವರ್ಷದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಹಿಂದಿನ ವರ್ಷಗಳಿಗಿಂತ ಈ ಬಾರಿಯ ದೀಪಾಲಂಕಾರ ಇನ್ನಷ್ಟು ಆಕರ್ಷಕ ವಾಗಿದೆ.

Also Read  ಕಡಬ: ಸ್ಕೂಟಿ ಹಾಗೂ ಓಮ್ನಿ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

error: Content is protected !!
Scroll to Top