(ನ್ಯೂಸ್ ಕಡಬ)newskadaba.com ಅ.04. ಐದು ವರ್ಷಗಳ ಅವಧಿಯಲ್ಲಿ ಒಂದು ಕೋಟಿ ಯುವಕರಿಗೆ ವಾರ್ಷಿಕವಾಗಿ 60,000 ರೂ. ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿಯ ಇಂಟರ್ನ್‌ಶಿಪ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಾಯೋಗಿಕ ಆಧಾರದ ಮೇಲೆ ಮೋದಿ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ.
2024- 25ರಲ್ಲಿ ಪ್ರಾಯೋಗಿಕ ಯೋಜನೆಯ ಒಟ್ಟು ವೆಚ್ಚ ಸುಮಾರು 800 ಕೋಟಿ ರೂ. ಗಳಾಗಿದೆ. ಈ ಆರ್ಥಿಕ ವರ್ಷದಲ್ಲಿ 1.25 ಲಕ್ಷ ಅಭ್ಯರ್ಥಿಗಳಿಗೆ ಇಂಟರ್ನ್‌ಶಿಪ್ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಕೇಂದ್ರ ಬಜೆಟ್ 2024ರಲ್ಲಿ ಘೋಷಿಸಲಾಗಿದೆ ಪ್ರಸಿದ್ಧ ಕಂಪನಿಗಳಲ್ಲಿ ಪ್ರಧಾನಮಂತ್ರಿಗಳ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ಇಂಟರ್ನ್‌ಗಳಿಗೆ ವಿಮಾ ರಕ್ಷಣೆಯನ್ನೂ ಕೂಡ ಒದಗಿಸಲಾಗುತ್ತದೆ. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅಭಿವೃದ್ಧಿಪಡಿಸಿದ ಆನ್‌ಲೈನ್ ಪೋರ್ಟಲ್ ಮೂಲಕ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.