(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04): ಜುಲೈ ಮತ್ತು ಆಗಸ್ಟ್ ತಿಂಗಳ ಹಣ ದಸರಾ ಒಳಗಡೆಯೇ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜುಲೈ ತಿಂಗಳ ಹಣ ಅ.07 ರಂದು ಮತ್ತು ಆಗಸ್ಟ್ ತಿಂಗಳ ಹಣ ಅ.09ರಂದು ಗೃಹಲಕ್ಷ್ಮೀಯರ ಖಾತೆಗೆ ಜಮೆಯಾಗಲಿದೆ. 1 ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ ಒಟ್ಟು ನಾಲ್ಕು ಸಾವಿರ ರೂ. ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ದಸರಾ ಒಳಗಡೆಯೇ ಗೃಹಲಕ್ಷ್ಮಿ ಹಣ ಜಮೆ
