(ನ್ಯೂಸ್ ಕಡಬ)newskadaba.com, (ಅ.04): ರಾಜ್ಯದಲ್ಲಿ ನಿನ್ನೆ ಸಾಧಾರಣ ಮಳೆಯಾಗಿದ್ದು, ಇನ್ನೂ ಎರಡು ದಿನ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾದರೆ, ಕೆಲವೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಮಂದುವರೆದ ಮಳೆ: ದಕ್ಷಿಣ ಒಳನಾಡಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ
