(ನ್ಯೂಸ್ ಕಡಬ)newskadaba.com, ಕೊಪ್ಪಳ(ಅ.04): ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿ ಗಣತಿ ಅನುಷ್ಠಾನ ಮಾಡಬೇಕು ಎಂದು ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಕ್ಯಾಬಿನೆಟ್ ನಲ್ಲಿ ತಂದು ಚರ್ಚೆ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ಮಾಡಬೇಕಿದೆ. ಅದಕ್ಕೆಲ್ಲಾ ಸಮಯ ತಗಲುತ್ತದೆ ಎಂದರು.
ಒಳ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ
