(ನ್ಯೂಸ್ ಕಡಬ)newskadaba.com, (ಅ.04): ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ
