ಕಾಲೇಜ್ ಗೆ ಬಾಂಬ್ ಬೆದರಿಕೆ; ಬೆಂಗಳೂರಿಗೆ ಎಚ್ಚರಿಕೆ ಕೊಟ್ಟ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com, ಬೆಂಗಳೂರು(.04): ಬೆಂಗಳೂರಿನಲ್ಲಿರುವ ಖಾಸಗಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆಂಗಳೂರಿನ ಬುಲ್ ಟೆಂಪಲ್ ರಸ್ತೆಯಲ್ಲಿರುವ ಖಾಸಗಿ ಕಾಲೇಜುಗಳಿಗೆ ಈ ಬಾಂಬ್‌ ಬೆದರಿಗೆ ಸಂದೇಶ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಇಮೇಲ್ ನೋಡಿದ ಕೂಡಲೇ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಹನುಮಂತನಗರ ಪೊಲೀಸರು ದೌಡಾಯಿಸಿದ್ದು, ಕಾಲೇಜು ಆವರಣದಲ್ಲಿ ಸದ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!
Scroll to Top